ಚಿತ್ರದುರ್ಗ: ಸರ್ಕಾರಿ ಆ್ಯಂಬುಲೆನ್ಸ್ಗೆ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾವಲಹಟ್ಟಿ ಗ್ರಾಮದ ಬಳಿ ನಡೆದಿದೆ.
ಆ್ಯಂಬುಲೆನ್ಸ್ ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು - ಚಿತ್ರದುರ್ಗ ಆ್ಯಂಬುಲೆನ್ಸ್ ಡಿಕ್ಕಿ
ಸರ್ಕಾರಿ ಆ್ಯಂಬುಲೆನ್ಸ್ಗೆ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾವಲಹಟ್ಟಿ ಗ್ರಾಮದ ಬಳಿ ನಡೆದಿದೆ.
ಆ್ಯಂಬುಲೆನ್ಸ್ ಡಿಕ್ಕಿ
ಸಿಂಗಾಪುರ ಗ್ರಾಮದ ನಿವಾಸಿ ಪಲ್ಲವಿ (18) ಮೃತ ಯುವತಿ. ರಸ್ತೆ ದಾಟುವ ವೇಳೆ ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಇನ್ನು ಯುವತಿ ಸಂಬಂಧಿಕರು ಜಿಲ್ಲಾಸ್ಪತ್ರೆ ಎದುರು ಜಮಾಯಿಸಿ ನ್ಯಾಯಕ್ಕಾಗಿ ಪಟ್ಟು ಹಿಡಿದು ಕೆಲ ಕಾಲ ಪ್ರತಿಭಟನೆ ಮಾಡಿದರು. ಈ ಕುರಿತು ಪೊಲೀಸರು ಮತ್ತು ಯುವತಿ ಸಂಬಂಧಿಕರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.