ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ. ಕೊರೊನಾ ವಿಚಾರದಲ್ಲೂ ಅವರು ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೆಟ್ಟ ಬಜೆಟ್ ನೀಡಿದೆ. ಈ ಬಗ್ಗೆ ಜನರಿಗೆ ಉತ್ಸಾಹವಿಲ್ಲ. ರೈತ, ಕಾರ್ಮಿಕ ಹಾಗೂ ಸಾಮಾನ್ಯ ಜನರಿಗೂ ತೊಂದರೆಯಾಗಿದೆ. ಯಾಕೆ ಸುಮ್ಮನೆ ಕುಳಿತಿದ್ದೀರಾ? ಎಂದು ಜನ ನಮಗೆ ಕರೆ ಮಾಡಿ ಕೇಳುತ್ತಿದ್ದಾರೆ ಎಂದರು.