ಕರ್ನಾಟಕ

karnataka

By

Published : Feb 23, 2020, 1:07 PM IST

ETV Bharat / state

ದೇಶ ವಿರೋಧಿ ಘೋಷಣೆ ಕೂಗಿದ್ರೆ, ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು: ಬಿ.ಸಿ.ಪಾಟೀಲ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಚಿತ್ರದುರ್ಗದ ಮಡಿವಾಳ ಮಾಚಿದೇವ ಮಠಕ್ಕೆ ಭೇಟಿ ನೀಡಿದ್ರು. ಬಳಿಕ ಅವರು ಮಾಧ್ಯಮದವರ ಜೊತೆ ಮಾತನಾಡಿದರು.

B.C. Patil
ಕೃಷಿ ಸಚಿವ ಬಿ.ಸಿ. ಪಾಟೀಲ್

ಚಿತ್ರದುರ್ಗ:ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ದೇಶ ದ್ರೋಹಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಮಡಿವಾಳ ಮಾಚಿದೇವ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ‌ ಅವರು, ದೇಶದ ಅನ್ನ, ನೀರು, ಗಾಳಿ ಸೇವಿಸಿ ದೇಶ ವಿರೋಧಿ ಘೋಷಣೆ ಸಲ್ಲದು. ಹಾಗಾಗಿ ಇಂಥವರ ಮೇಲೆ ಗುಂಡಿಕ್ಕುವ ಕಾನೂನು ತರಲು ಪ್ರಧಾನಿಗೆ ಮನವಿ ಮಾಡುತ್ತೇನೆ ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ್

ಕ್ಯಾಸಿನೋ ವಿಚಾರಕ್ಕೆ ಸಮರ್ಥನೆ:

ಪ್ರವಾಸೋದ್ಯಮ ಅಭಿವೃದ್ಧಿಗೆ ಅಗತ್ಯ ಕ್ರಮ ಬೇಕಿದೆ. ಪ್ರವಾಸೋದ್ಯಮ ಎಂಬುದು ಮಳೆ ಇಲ್ಲದ ಬೆಳೆ ಇದ್ದಂತೆ. ನಮ್ಮ ದೇಶದ ಅನೇಕರು ಶ್ರೀಲಂಕಾ, ಗೋವಾ, ಸಿಂಗಾಪುರಕ್ಕೆ ಪ್ರವಾಸ ಹೋಗುತ್ತಾರೆ. ಕ್ಯಾಸಿನೋ ಆಡಲು ನಮ್ಮ ದುಡ್ಡು ಹೋಗುತ್ತಿದ್ದು, ನಮ್ಮ ದೇಶಕ್ಕೆ ಕೊರತೆ ಆಗಲ್ವಾ? ಫುಡ್ ಟೂರಿಸಮ್ ಸೇರಿ ಇತರೆ ಹೇಳಿಕೆ ಬಿಟ್ಟು ಕ್ಯಾಸಿನೋ ಬಗ್ಗೆ ಸಚಿವ ಸಿ.ಟಿ. ರವಿ ಚರ್ಚೆ ಮಾಡಿದ್ದು, ಅದೂ ಸಹ ತಪ್ಪೇನಿಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಸಮರ್ಥಿಸಿಕೊಂಡರು.

ABOUT THE AUTHOR

...view details