ಚಿತ್ರದುರ್ಗ: 17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ.ಹೊಸಬರು ಪಕ್ಷಕ್ಕೆ ಬರುತ್ತಾರೆ ಎಂದಾಗ ಪಕ್ಷ ಕಟ್ಟಿ ಬೆಳೆಸಿದವರಿಗೆ ಅಸಮಾಧಾನ ಉಂಟಾಗುವುದು ಸಹಜ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದ್ರು.
ಚಿತ್ರದುರ್ಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಐಕ್ಯತಾ ಅಭಿಯಾನ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪ್ರತಿಕ್ರಿಯಿಸಿದ ಅವರು, 17 ಜನ ಶಾಸಕರ ಅನರ್ಹತೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಅವರೆಲ್ಲಾ ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇಲ್ಲದೇ ಇರಬಹುದು. ಅದ್ರೆ ಕೆಲವರು ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇರುವ ಕ್ಷೇತ್ರಗಳಲ್ಲಿ ಮಾತ್ರ ಅಸಮಾಧಾನ ಇದೆ. ಅದನ್ನು ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದರು.