ಕರ್ನಾಟಕ

karnataka

ETV Bharat / state

ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ - Chitradurga latest news

ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಗೆ ಬೆದರಿಕೆ ಹಾಕುವ ಮೂಲಕ ಚಪ್ಪಲಿ ಹಾಗೂ ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬೆಸ್ಕಾಂ ಸಿಬ್ಬಂದಿ ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

Assault on Bescom staff in Chitradurga
ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ

By

Published : Nov 27, 2020, 6:24 PM IST

ಚಿತ್ರದುರ್ಗ:ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬೆಸ್ಕಾಂ ಕಚೇರಿ ಬಳಿ ನಡೆದಿದೆ.

ಇದನ್ನೂ ಓದಿ:ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ : ವಿದ್ಯುತ್ ತಂತಿ ಸಿಲುಕಿ ದ್ವಿಚಕ್ರ ವಾಹನ ಅಪಘಾತ

ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕುವ ಮೂಲಕ ಚಪ್ಪಲಿ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಲೈನ್​ಮ್ಯಾನ್ ಕೇಶವ್ ಎಂಬುವರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಒಬ್ಬರ ಮೇಲೊಬ್ಬರು ನಿಂತು ವಿದ್ಯುತ್‌ ಸಂಪರ್ಕ ದುರಸ್ಥಿ: ಬೆಸ್ಕಾಂ ಸಿಬ್ಬಂದಿ ಕರ್ತವ್ಯನಿಷ್ಠೆ

ನೀರಾವರಿ ಪಂಪ್‌ ಸೆಟ್​ಗೆ ನಿರಂತರ ಜ್ಯೋತಿ ಲೈನ್ ಪಡೆಯಲಾಗಿತ್ತು. ಇದನ್ನು ಕಡಿತಗೊಳಿಸಿದ್ದಕ್ಕೆ ರೊಚ್ಚಿಗೆದ್ದ ಶಿವರಾಜ್ ಹಾಗೂ ಆತನ ಮಕ್ಕಳಾದ ಚೇತನ್, ನಿತಿನ್ ಎಂಬುವರು​ ಲೈನ್​ಮ್ಯಾನ್​ ಕೇಶವ್ ಮೇಲೆ ​ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಕೇಶವ್ ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಹಲ್ಲೆ ಮಾಡಿದವರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details