ಚಿತ್ರದುರ್ಗ:ಕಾಂಗ್ರೆಸ್ ಕಾರ್ಯಕರ್ತರು ಸೇರಿಕೊಂಡು ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
ಲೋಕಲ್ ಫೈಟ್ನಲ್ಲಿ ಕೈ - ಕಮಲ ಕಾರ್ಯಕರ್ತರ ಮಾರಾಮಾರಿ..! - ಮಾರಣಾಂತಿಕ ಹಲ್ಲೆ
ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಸೇರಿಕೊಂಡು ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇವರ ಗೂಂಡಾ ವರ್ತನೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಬಿಜೆಪಿಗೆ ಬೆಂಬಲಿಸದಂತೆ ಕಾಂಗ್ರೆಸ್ನ ನಗರಸಭೆ ಅಭ್ಯರ್ಥಿ ರವಿಚಂದ್ರ ನಾಯ್ಕ್ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಸಂತೋಷ ನಾಯ್ಕ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ನ ಗೂಂಡಾ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಗೊಳಗಾದ ಸಂತೋಷನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.