ಚಿತ್ರದುರ್ಗ:ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಗ್ರಾಮದ ಬಳಿ ನಡೆದಿದೆ.
ಆಂಧ್ರ ಚೆಕ್ ಪೋಸ್ಟ್ ಬಳಿ ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ - ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ
ಚಿತ್ರದುರ್ಗ ಜಿಲ್ಲೆ ಪಾತಪ್ಪನಗುಡಿ ಗ್ರಾಮದ ಬಳಿಯ ಆಂಧ್ರ ಪ್ರದೇಶ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಡೆದಿದೆ.
![ಆಂಧ್ರ ಚೆಕ್ ಪೋಸ್ಟ್ ಬಳಿ ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ Assault on Cop at Andhra Check post](https://etvbharatimages.akamaized.net/etvbharat/prod-images/768-512-7218279-835-7218279-1589611035324.jpg)
ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ
ಪಾತಪ್ಪನಗುಡಿ ಗ್ರಾಮದ ಆಂಧ್ರ ಪ್ರದೇಶ ಚೆಕ್ ಪೋಸ್ಟ್ ಬಳಿ ಪರಶುರಾಂಪುರ ಠಾಣೆಯ ಪೇದೆ ಶಿವಣ್ಣ ಕರ್ತವ್ಯದಲ್ಲಿದ್ದರು. ಈ ವೇಳೆ ಅಲ್ಲಿಗೆ ಬಂದ ಆಂಧ್ರ ಮೂಲದ ಮಂಜು ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಮದ್ಯದ ಅಮಲಿನಲ್ಲಿ ಈತ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ
ಪೇದೆ ಮೇಲೆ ಹಲ್ಲೆ ನಡೆಸಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated : May 16, 2020, 5:11 PM IST