ಚಿತ್ರದುರ್ಗ:ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಟೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ನೂರಾರು ಆಟೋ ಚಾಲಕರು ಪ್ರತಿಭಟನೆ ನಡೆಸಿದ್ದು, ಹಗಲು ರಾತ್ರಿ ಎನ್ನದೇ ಕಾರ್ಯ ನಿರ್ವಹಿಸುವ ಆಟೋ ಚಾಲಕರಿಗೆ ಸೂರು ಕಲ್ಪಿಸುವಂತೆ ಒತ್ತಾಯಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಪ್ರತಿಭಟನೆ..
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ನೂರಾರು ಆಟೋ ಚಾಲಕರು ಪ್ರತಿಭಟನೆ ನಡೆಸಿದರು.
ನಗರದ ಹಳೇ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಆಟೋ ರಿಕ್ಷಾ ಸಮೇತ ಜಮಾಯಿಸಿದ ಆಟೋ ಚಾಲಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಾಲಾ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಡಿಸಿ ವೃತ್ತ ತಲುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಆಟೋ ಸೇವೆಯ ಕನಿಷ್ಟ ದರವನ್ನು ನಿಗದಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಪಟ್ಟು ಹಿಡಿದ ಪ್ರತಿಭಟನಾಕಾರರು ಡಿಸಿ ವೃತ್ತವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಸ್ಥಳಕ್ಕಾಗಮಿಸುವಂತೆ ಬೇಡಿಕೆ ಇಡಲಾಯಿತು. ನಂತರ ಸ್ಥಳಕ್ಕಾಗಮಿಸಿದ ಎಡಿಸಿ ಸಂಗಪ್ಪನವರು ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನ ಈಡೇರಿಸುವುದಾಗಿ ಭರವಸೆ ನೀಡಿದರು.