ಚಿತ್ರದುರ್ಗ: ನಗರದಲ್ಲೂ ಕಾಂಗ್ರೆಸ್ಗೆ ಬಂಡಾಯ ತಲೆನೋವಾಗಿ ಪರಿಣಮಿಸಿದೆ. ಕೈ ವಿರುದ್ಧ ಬಂಡಾಯದ ಬಾವುಟ ಹಾರಿಸಲಿರುವ ಎಸ್ಸಿ ಎಡಗೈ ಸಮುದಾಯದ ಪ್ರಭಾವಿ ಮುಖಂಡ ಡಾ. ಬಿ.ತಿಪ್ಪೇಸ್ವಾಮಿ ಟಿಕೆಟ್ ನೀಡದ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ಗೆ ಬಂಡಾಯದ ಬಿಸಿ: ನಾಮಪತ್ರ ಸಲ್ಲಿಸಲಿದ್ದಾರಂತೆ ತಿಪ್ಪೇಸ್ವಾಮಿ - ಎಡಗೈ
ಕಾಂಗ್ರೆಸ್, ಬಿಜೆಪಿ ವಿರುದ್ಧ ಆಕ್ರೋಶಿತರ ಮತ ವಿಭಜನೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೊರಗಿನಿಂದ ಬಂದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪಕ್ಷಗಳು ಮಣೆ ಹಾಕಿರುವುದರಿಂದ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡದಿರುವುದು ಬಂಡಾಯಕ್ಕೆ ಕಾರಣವಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್, ಬಿಜೆಪಿ ವಿರುದ್ಧ ಆಕ್ರೋಶಿತರ ಮತ ವಿಭಜನೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೊರಗಿನಿಂದ ಬಂದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪಕ್ಷಗಳು ಮಣೆ ಹಾಕಿರುವುದರಿಂದ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡದಿರುವುದು ಬಂಡಾಯಕ್ಕೆ ಕಾರಣವಾಗಿದೆ.
ಎರಡೂ ಪಕ್ಷಗಳಿಂದ ಟಿಕೆಟ್ ವಂಚಿತರಾಗಿರುವ ತಿಪ್ಪೇಸ್ವಾಮಿ ಇದೀಗ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. 2009ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 2 ಲಕ್ಷ ಮತ ಪಡೆದಿದ್ದ ಡಾ.ಬಿ. ತಿಪ್ಪೇಸ್ವಾಮಿ, 30 ವರ್ಷಗಳ ಕಾಲ ಕಾಂಗ್ರೆಸ್ನಲ್ಲಿದ್ದು ಇತ್ತೀಚೆಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು. ಜೆಜೆ ಹಟ್ಟಿ ತಿಪ್ಪೇಸ್ವಾಮಿ ಎಂದೇ ಖ್ಯಾತಿ ಹೊಂದಿರುವ ಎಸ್ಸಿ ಎಡಗೈ ಸಮುದಾಯದ ಪ್ರಭಾವಿಯಾಗಿರುವ ಇವರು, ಮತದಾರರ ಒತ್ತಾಯಕ್ಕೆ ಮಣಿದು ಕಣಕ್ಕಿಳಿಯಲು ಸಜ್ಜಾಗಿದ್ದಾರೆ.