ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನಬೇವಿನಹಳ್ಳಿಯಲ್ಲಿ ಕರಡಿ ದಾಳಿಯಾದ ಪರಿಣಾಮ ರೈತನಿಗೆ ಗಂಭೀರ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ರೈತನ ಮೇಲೆ ಕರಡಿ ದಾಳಿ.. ಸ್ವಲ್ಪದರಲ್ಲೇ ಮಿಸ್ ಆಗಿ ಬದುಕುಳಿಯಿತು ಬಡಜೀವ.. - ಕರಡಿ ದಾಳಿ
ರೈತನೋರ್ವ ಜಮೀನಿನಲ್ಲಿ ಕಾರ್ಯನಿರ್ವಹಿಸುವ ವೇಳೆ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೈತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರಡಿ ದಾಳಿ
ಹನುಮಂತಪ್ಪ ಕರಡಿ ದಾಳಿಗೊಳಗಾದ ವ್ಯಕ್ತಿ. ತಾಲೂಕಿನ ಕಾನಬೇವಿನಹಳ್ಳಿ ಗ್ರಾಮದಲ್ಲಿರುವ ಜಮೀನಿನಲ್ಲಿ ಕಾರ್ಯನಿರ್ವಹಿಸುವ ವೇಳೆ ಕರಡಿ ದಾಳಿ ನಡೆಸಿದೆ. ಪರಿಣಾಮ ರೈತ ಹನುಮಂತಪ್ಪನ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇನ್ನು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದರು.