ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ, ಹೊಸದುರ್ಗ ಗಡಿ ಭಾಗದ ರೈತರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆಯಾಗಿದೆ.
ರೈತರಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ - ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಗಡಿ ಭಾಗದ ರೈತರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕರಡಿ ಸೆರೆ
ನಿನ್ನೆ ಅಡಕೆ ತೋಟಗಳಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು ಕಂಡಿದ್ದ ರೈತರು ಆತಂಕ ವ್ಯಕ್ತಪಡಿಸಿದ್ದರು. ಆದರೆ ಇಂದು ಕರಡಿ ಸೆರೆಯಾದ ಬೆನ್ನಲ್ಲೇ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಜಿಲ್ಲೆಯ ಹೊಳಲ್ಕೆರೆ, ಹೊಸದುರ್ಗ ತಾಲೂಕು ಗಡಿ ಭಾಗದ ಜಾನಕಲ್ ಪ್ರದೇಶದಲ್ಲಿ ಕರಡಿ ಸಂಚರಿದ ಹಿನ್ನೆಲೆ ಹೊಸದುರ್ಗ ಅರಣ್ಯ ಇಲಾಖೆ ಸಿಬ್ಬಂದಿ ತಡರಾತ್ರಿ ಕಾರ್ಯಾಚರಣೆ ನಡೆಸುವ ಮೂಲಕ ಜಾಂಬುವಂತನನ್ನು ಸೆರೆ ಹಿಡಿದುಚಿತ್ರದುರ್ಗ ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.