ಚಿತ್ರದುರ್ಗ:ಗ್ರಾಮಕ್ಕೆ ಕರಡಿ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಸಮೀಪದ ದಳವಾಯಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ನುಗ್ಗಿ ಕರಡಿಯ ದಾಂಧಲೆ : ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ - ಅರಣ್ಯ ಇಲಾಖೆ ಸಿಬ್ಬಂದಿ
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಸಮೀಪದ ದಳವಾಯಿಕಟ್ಟೆಗೆ ನುಗ್ಗಿದ ಕರಡಿಯೊಂದು 7 ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ಗ್ರಾಮಕ್ಕೆ ನುಗ್ಗಿದ ಕರಡಿ
ದಳವಾಯಿಕಟ್ಟೆ ಬಳಿ ದಾಳಿ ನಡೆಸಿದ ಕರಡಿ ಒಂದು ಹಸು ಹಾಗೂ 7 ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಇವರಲ್ಲಿ ರಮೇಶ್, ಉಮೇಶ್, ಶಶಿ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬುಕ್ಕಸಾಗರದ ರಾಜಣ್ಣ (50) ಸಾವನ್ನಪ್ಪಿದ್ದಾರೆ.
ಗಾಬರಿಗೊಂಡು ಗ್ರಾಮಕ್ಕೆ ಕರಡಿ ನುಗ್ಗಿದ್ದರಿಂದ ಜನರಲ್ಲಿ ಆತಂಕ ಹೆಚ್ಚಿದ್ದು, ಕರಡಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.