ಚಿತ್ರದುರ್ಗ:ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬೈಕ್ವೊಂದು ಅಪಘಾತಗೊಂಡು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕು ಜೆ.ಎನ್.ಕೋಟೆ ಬಳಿ ನಡೆದಿದೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ : ವಿದ್ಯುತ್ ತಂತಿ ಸಿಲುಕಿ ದ್ವಿಚಕ್ರ ವಾಹನ ಅಪಘಾತ - byke accident in chitradurga
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕು ಜೆ.ಎನ್.ಕೋಟೆ ಬಳಿ ನಡೆದಿದೆ.
ದ್ವಿಚಕ್ರ ವಾಹನ ಅಪಘಾತ
ರಸ್ತೆ ಮಧ್ಯೆ ಹರಿದು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಸವಾರ ಪಾರಾಗಿದ್ದಾನೆ. ಘಟನೆಯಲ್ಲಿ ಸಜ್ಜನಕೆರೆ ಗ್ರಾಮದ ನಿವಾಸಿ ಶಶಿಧರ್(38) ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.