ಚಿತ್ರದುರ್ಗ :ದ್ವಿಚಕ್ರ ವಾಹನಕ್ಕೆ ಬುಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್‌ನಲ್ಲಿದ್ದ ನಾಗರಾಜ (40) ಹಾಗೂ ಮುಮ್ತಾಜ್ (35) ಮೃತರು ಎಂದು ಗುರುತಿಸಲಾಗಿದೆ. ಅಪಘಾತ ನಂತರ ಬುಲೆರೊ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.