ಚಿತ್ರದುರ್ಗ:ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭರಮಸಾಗರದ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ನಡೆದಿದೆ.
ಬೈಕ್ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - etv bharat
ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 04 ರಲ್ಲಿ ನಡೆದಿದೆ.
ಮೃತ ಯುವಕ ರಾಕೇಶ್
ನಂದಿಹಳ್ಳಿ ಗ್ರಾಮದ ರಾಕೇಶ್ (20) ಮೃತ ಯುವಕ. ದಾವಣಗೆರೆ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಾಕೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭರಮಸಾಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.