ಚಿತ್ರದುರ್ಗ:ಕಳೆದ ಎರಡು ವರ್ಷಗಳಿಂದ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಜಿ.ರಾಧಿಕಾ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತಾನಾಡಿದ ಎಸ್‌ಪಿ, ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಹರಿಹರ ಮೂಲದ ಕಡೆಮನೆ ಕಿರಣ್ ಎಂಬಾತನನ್ನು ಬಂಧಿಸಲಾಗಿದೆ. ಈತ ಕಳೆದ ಎರಡು ವರ್ಷಗಳಿಂದ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದು, ಈ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕಾಗಿ ಎಎಸ್‌ಪಿ ಮಾಹಾನಿಂಗ ನಂದಗಾವಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 2.70 ಲಕ್ಷ ರೂ. ಮೌಲ್ಯದ 10 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಈ ಪೈಕಿ ನಾಲ್ಕು ದಾವಣಗೆರೆ ಜಿಲ್ಲೆಗೆ ಸೇರಿದ್ದಾಗಿವೆ.