ಚಿತ್ರದುರ್ಗ:ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ದಾಸಣ್ಣಮಳಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ: ಲಂಚಕ್ಕೆ ಕೈಚಾಚಿ ಎಸಿಬಿ ಬಲೆಗೆ ಬಿದ್ದ ಗ್ರಾ.ಪಂಚಾಯತ್ ಬಿಲ್ ಕಲೆಕ್ಟರ್ - ಚಿತ್ರದುರ್ಗ ಜಿಲ್ಲೆ ಹಿರಿಯೂರು
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರು ತಾಲೂಕಿನ ಬಿಲ್ ಕಲೆಕ್ಟರ್ ಬೊಮ್ಮನಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಬೊಮ್ಮನಾಯಕ-ಎಸಿಬಿ ಬಲೆಗೆ ಬಿದ್ದ ಬಿಲ್ ಕಲೆಕ್ಟರ್
ಬಿಲ್ ಕಲೆಕ್ಟರ್ ಬೊಮ್ಮನಾಯಕ ದಾಸಣ್ಣಮಳಿಗೆ ಗ್ರಾಮದ ತಿಪ್ಪಮ್ಮ ಎಂಬವರಿಗೆ ಮನೆಯ ಇ-ಸ್ವತ್ತು ಮಾಡಿಕೊಡಲು 4 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ತಿಪ್ಪಮ್ಮ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ, ಗ್ರಾಮ ಪಂಚಾಯತಿಯಲ್ಲಿ ಅರ್ಜಿದಾರರಾದ ತಿಪ್ಪಮ್ಮ ಅವರಿಂದ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.