ಚಿತ್ರದುರ್ಗ: ಲೋಕಸಭಾ ಚುನಾವಣೆ ದಿನೇ ದಿನೇ ರಂಗೇರತೊಡಗಿದ್ದು, ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಕೂಡ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಮಾಜಿ ಸಚಿವ ಹೆಚ್ ಆಂಜನೇಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ - ಮಾಜಿ ಸಚಿವ ಹೆಚ್ ಆಂಜನೇಯ, ಕ್ಷೇತ್ರ,ಬಿಜೆಪಿ, ಅಭ್ಯರ್ಥಿ, ಸಭೆ, ಮತಯಾಚನೆ,
ಕೈ ಭದ್ರಕೋಟೆಯಾಗಿದ್ದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದದಲ್ಲಿ ಜನರು ಕಮಲದ ಕೈ ಹಿಡಿದಿದ್ದು, ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ
ಮಾಜಿ ಸಚಿವ ಹೆಚ್. ಆಂಜನೇಯರವರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಲಗ್ಗೆ ಇಟ್ಟಿದ್ದು, ಮತದಾರರಲ್ಲಿ ಮತಯಾಚಿಸಿದರು. ನಂತರ ಕಾರ್ಯಕರ್ತರ ಸಭೆ ನಡೆಸಿ ಒಗ್ಗಟ್ಟಾಗಿ ಲೋಕಸಭಾ ಚುನಾವಣೆಗೆ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿಕೊಂಡರು.
ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ
ಈಗಾಗಲೇ ಕೈ ಭದ್ರಕೋಟೆಯಾಗಿದ್ದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜನರು ಕಮಲದ ಕೈ ಹಿಡಿದಿದ್ದು, ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಮತ ನೀಡುವಂತೆ ಮತದಾರರಲ್ಲಿ ನಾರಾಯಣ ಸ್ವಾಮಿ ಮನವಿ ಮಾಡಿಕೊಂಡರು. ಇದೇ ವೇಳೆ ಹೊಳಲ್ಕೆರೆ ಶಾಸಕ ಚಂದ್ರಪ್ಪ ಉಪಸ್ಥಿತರಿದ್ದರು.