ಕರ್ನಾಟಕ

karnataka

ETV Bharat / state

ಸುಳ್ಳೇ ಬಿಜೆಪಿಯವರ ಮನೆದೇವರು: ಡಿ.ಕೆ.ಶಿವಕುಮಾರ್ - congress

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

bjp-cant-survive-without-lying-lies-are-their-god-dk
ಬಿಜೆಪಿ ಸುಳ್ಳು ಹೇಳದೆ ಬದುಕಲು ಸಾಧ್ಯವಿಲ್ಲ, ಸುಳ್ಳೆ ಅವರ ಮನೆದೇವರು: ಡಿಕೆಶಿ

By

Published : Jan 9, 2023, 6:56 AM IST

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಎಸ್​ಸಿ, ಎಸ್​ಟಿ ಐಕ್ಯತಾ ಸಮಾವೇಶ

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಳ್ಳು ಹೇಳದೇ ಬದುಕಲು ಸಾಧ್ಯವಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು. ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ಎಸ್​ಸಿ ಮತ್ತು ಎಸ್​ಟಿ ಸಮುದಾಯದ ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಎಂದು ಬಣ್ಣಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರ ಶಕ್ತಿಯಾಗಿ ಅವರ ಜೊತೆ ಕಾಂಗ್ರೆಸ್ ನಿಂತಿದೆ. ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಎಂದರೆ ಕಾಂಗ್ರೆಸ್ ಪಕ್ಷ. ಪರಿಶಿಷ್ಟ ವರ್ಗ ಕಾಂಗ್ರೆಸ್​ನ ಬುನಾದಿ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಬಾಬು ಜಗಜೀವನ್ ರಾಂ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಲಂಕರಿಸಿದ್ದ ಸ್ಥಾನವನ್ನು ನಮ್ಮ ರಾಜ್ಯದ ಖರ್ಗೆ ಅಲಂಕರಿಸಿದ್ದಾರೆ. 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ದುಡಿದ ಕಾರಣಕ್ಕೆ ಅವರ ಹಿರಿತನಕ್ಕೆ ಸಿಕ್ಕ ಗೌರವ ಇದು. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 136 ಸ್ಥಾನಗಳನ್ನು ಗಳಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗದ ನಿರ್ಣಯಗಳಿಗೆ ಕಾಂಗ್ರೆಸ್ ಪಕ್ಷ ಬದ್ದ. ಬಿಜೆಪಿಯವರ ಸುಳ್ಳಿನ ಕಂತೆಗೆ ನೀವು ಬಲಿಯಾಗಬೇಡಿ. ಅವರು ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದರು.

ಒಂದು ವರ್ಷದ ಹಿಂದೆ ಮೇಕೆದಾಟು ಹೋರಾಟ, ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬ, ಈಗ ಚಿತ್ರದುರ್ಗದಲ್ಲಿ ಎಸ್​ಸಿ ಮತ್ತು ಎಸ್​ಟಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದೇ ಜನವರಿ 16 ರಂದು ಮಹಿಳೆಯರಿಗೆ ಶಕ್ತಿ ತುಂಬುವ ಉದ್ದೇಶದಿಂದ ಮಹಿಳಾ ಸಮಾವೇಶ ಹಮ್ಮಿಕೊಳ್ಳುತ್ತೇವೆ. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್ ಅಲೋಚಿಸಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ , ಪ್ರಿಯಾಂಕ್ ಖರ್ಗೆ, ಎಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್, ರಾಮಲಿಂಗ ರೆಡ್ಡಿ, ಶಿವರಾಜ್ ತಂಗಡಗಿ, ಬಿ.ಕೆ.ಹರಿಪ್ರಸಾದ್, ಡಿ.ಸುಧಾಕರ್, ಶಾಸಕರಾದ ರಘುಮೂರ್ತಿ ಹಾಗು ಅನೇಕರಿದ್ದರು.

ಇದನ್ನೂ ಓದಿ:ಓದಿನಲ್ಲಿ ಪ್ರೇರೇಪಿಸಲು ವಿದ್ಯಾರ್ಥಿನಿಯರಿಗೆ ವಿಮಾನಯಾನ: ಸರ್ಕಾರಿ ಶಾಲೆಗೆ ಹೆಸರು ತಂದ ಪ್ರಾಂಶುಪಾಲರ ಮಾದರಿ ಕಾರ್ಯ

ABOUT THE AUTHOR

...view details