ಚಿತ್ರದುರ್ಗ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆ ಜಿಲ್ಲೆಯ 9 ಮಂಡಲದ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕ ತಿಪ್ಪಾರೆಡ್ಡಿ ಅವರು ಮಾತನಾಡಿದರು ಚಿತ್ರದುರ್ಗ ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಚಿತ್ರದುರ್ಗ ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್, ಭರಮಸಾಗರ ಮಂಡಲ ಅದ್ಯಕ್ಷ ಶೈಲೇಂದ್ರ, ಚಳ್ಳಕೆರೆ ಮಂಡಲ ಅದ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ನಾಯಕನಹಟ್ಟಿ ಮಂಡಲ ಅದ್ಯಕ್ಷ ರಾಮರೆಡ್ಡಿ, ಹಿರಿಯೂರು ಮಂಡಲ ಅಧ್ಯಕ್ಷ ವಿಶ್ವನಾಥ, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ. ಮಂಜುನಾಥ, ಹೊಳಲ್ಕೆರೆ ಮಂಡಲ ಅಧ್ಯಕ್ಷ ಸಿದ್ದೇಶ್, ಹೊಸದುರ್ಗ ಮಂಡಲ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್ ರಾಜೀನಾಮೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ 9 ಮಂಡಲದ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ಎಂದು ಸಿಎಂ, ಗೃಹ ಸಚಿವರು ಅಸಮರ್ಥ ಹೇಳಿಕೆ ನೀಡುತ್ತಿದ್ದಾರೆ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರ ಜೀವಕ್ಕೆ ಬೆಲೆ ಕಟ್ಟಲಾಗದು. ಕೇಂದ್ರ- ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗಲೂ ಸರಣಿ ಹತ್ಯೆ ನಡೆದಿದೆ. ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲದಂತಾಗಿರುವುದು ದುರಂತ. ಸರ್ಕಾರ ಎಚ್ಚೆತ್ತು ಹತ್ಯೆಗೆ ಕಾರಣರಾದವರ ಹೆಡೆಮುರಿ ಕಟ್ಟಲಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ಚಾಮರಾಜನಗರದಲ್ಲಿ ರಾಜೀನಾಮೆ ಚಳವಳಿ:ಪ್ರವೀಣ್ ಹತ್ಯೆ ಖಂಡಿಸಿ ಸರ್ಕಾರ ಮತ್ತು ಬಿಜೆಪಿ ವರಿಷ್ಠರ ವಿರುದ್ಧ ತಿರುಗಿಬಿದ್ದು ಆರಂಭಿಸಿರುವ ರಾಜೀನಾಮೆ ಚಳವಳಿ ಜಿಲ್ಲೆಯಲ್ಲೂ ಆರಂಭವಾಗಿದೆ.
ಚಾಮರಾಜನಗರದಲ್ಲಿ ರಾಜೀನಾಮೆ ಚಳವಳಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಅವರಿಗೆ ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್ ತಮ್ಮ ಸಹಕಾರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸ್ಥಾನಕ್ಕೆ ನಗರಸಭೆ ಸದಸ್ಯ ಸಿ ಎಂ ಶಿವರಾಜು, ನಗರ ಮಂಡಲ ಉಪಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಆರೋಗ್ಯ ಸಮಿತಿಯ ಸುಂದರ್ ರಾಜು, ಆರ್ ಎಲ್ ನಾಗೇಂದ್ರ ಎಸ್ ಟಿ ಮೋರ್ಚಾ ಟೌನ್ ಅಧ್ಯಕ್ಷ ಚಂದ್ರಶೇಖರ್, ಸುದರ್ಶನ್ ಆಳ್ವ, ಆರಾಧನಾ ಸಮಿತಿ ನಿರ್ದೇಶಕ ರಮೇಶ್ ನಾಯಕ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಇನ್ನು ಗುಂಡ್ಲುಪೇಟೆ ಮಂಡಲ ಕಾರ್ಯದರ್ಶಿ ಸ್ಥಾನಕ್ಕೆ ಶಾಂತಪ್ಪ ದೊಡ್ಡತುಪ್ಪೂರು ರಾಜೀನಾಮೆ ಸಲ್ಲಿಸಿರುವ ಫೋಟೋವನ್ನು ಫೇಸ್ಬುಕ್ನಲ್ಲಿ ಹಾಕಿಕೊಂಡಿದ್ದಾರೆ. ಜೊತೆಗೆ, ನಮಗೆ ರಕ್ಷಣೆಯಿಲ್ಲದ ವ್ಯವಸ್ಥೆಯಲ್ಲಿ ಇರಲಾಗಲ್ಲ ಎಂದು ಬರೆದುಕೊಂಡಿದ್ದಾರೆ. ಇವರೊಟ್ಟಿಗೆ ಹಲವು ಕಾರ್ಯಕರ್ತರು ಕಾರ್ಯಕರ್ತ ಸ್ಥಾನದಿಂದ ವಿಮುಕ್ತಿ ಹೊಂದುವುದಾಗಿ ಘೋಷಿಸಿಕೊಂಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಾಮೂಹಿಕ ರಾಜೀನಾಮೆ:ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ವಿರುದ್ದವೇ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಆಕ್ರೋಶವನ್ನು ಹೊರ ಹಾಕಿದೆ.
ಚಿಕ್ಕಮಗಳೂರಿನಲ್ಲಿ ಸಾಮೂಹಿಕ ರಾಜೀನಾಮೆ ಸಾಮೂಹಿಕ ರಾಜೀನಾಮೆಗೆ ಬಿಜೆಪಿ ಯುವ ಮೋರ್ಚಾ ಸದಸ್ಯರು ಮುಂದಾಗಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಇದಾಗಿದ್ದು, ಸಾಮೂಹಿಕ ರಾಜೀನಾಮೆಗೆ ಯುವ ಮೋರ್ಚಾ ಘಟಕ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿದ್ದಾರೆ.
ಓದಿ:ಪ್ರವೀಣ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ಮನೆ ನಿರ್ಮಿಸಿ ಕೊಡಲು ಬಿಜೆಪಿ ನಿರ್ಧಾರ