ಕರ್ನಾಟಕ

karnataka

ETV Bharat / state

ಕೋಟೆನಾಡಲ್ಲಿ ಬಿಜೆಪಿಗೆ ಮತ್ತೆ ಶಾಕ್​: ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಬಿಜೆಪಿ ಮುಖಂಡ! - undefined

ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮುಖಂಡ ಕೆ.ಟಿ ಕುಮಾರಸ್ವಾಮಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮುಖಂಡ ಕೆ.ಟಿ ಕುಮಾರಸ್ವಾಮಿ ಭಾಗಿ

By

Published : Apr 3, 2019, 4:47 PM IST

ಚಿತ್ರದುರ್ಗ: ಈ ಹಿಂದೆ ಜಿಲ್ಲೆಯಲ್ಲಿ ಭೋವಿ ಸಮಾಜವು ಬಿಜೆಪಿ ವಿರುದ್ಧ ಮತ ಚಲಾಯಿಸಲು ನಿರ್ಧರಿಸಿ ಶಾಕ್ ನೀಡಿತ್ತು. ಆದರೆ ಇದೀಗ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ.

ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮುಖಂಡ ಕೆ.ಟಿ ಕುಮಾರಸ್ವಾಮಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲದಲ್ಲಿ ನಡೆದ ಪ್ರಚಾರದ ವೇಳೆ ಬಿಜೆಪಿ ಮುಖಂಡರು ಕಾಣಿಸಿಕೊಂಡಿದ್ದು, ಇದೀಗ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮುಖಂಡ ಕೆ.ಟಿ ಕುಮಾರಸ್ವಾಮಿ ಭಾಗಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಹಾಗೂ ಬಿಎಸ್​ವೈ ಅವರ ಆಪ್ತರಾಗಿದ್ದ ಕೆ.ಟಿ. ಕುಮಾರಸ್ವಾಮಿ ಮೈತ್ರಿ ಪಕ್ಷಗಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಮೂಲಕ‌ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕ ದಿ. ತಿಪ್ಪೇಸ್ವಾಮಿ ಅವರ ಪುತ್ರ ಕೆ‌.ಟಿ ಕುಮಾರಸ್ವಾಮಿ ಬಿಜೆಪಿ ತೊರೆದು ಜೆಡಿಎಸ್ ಸೇರುವ ಸಾಧ್ಯತೆ ಹೆಚ್ಚಾಗಿದೆ.

ಹಾಲಿ ಸಂಸದ ಮೈತ್ರಿ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಿರುವುದು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಕೆ ಟಿ ಕುಮಾರಸ್ವಾಮಿ.

For All Latest Updates

TAGGED:

ABOUT THE AUTHOR

...view details