ಚಿತ್ರದುರ್ಗ:ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸದಾಗಿ 11 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.
ಕೋಟೆನಾಡಿನಲ್ಲಿ ಈವರೆಗೆ ಒಟ್ಟು 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ 18 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಜಿಲ್ಲಾಸ್ಪತ್ರೆ, ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.