ಚಿತ್ರದುರ್ಗ: ಲಾಕ್‌ಡೌನ್ ಹಾಗೂ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ನಿರ್ಮಾಣ ಕಾರ್ಮಿಕರು ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಕಾರ್ಮಿಕರಿಗೆ ಕೋವಿಡ್ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ - Building construction and zoning workers protest at Chitradurga
ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಕೋವಿಡ್ ಪರಿಹಾರ ನೀಡುವಂತೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಮತ್ತು ವಲಯ ಕಾರ್ಮಿಕರು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಘಟನೆಯ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
Protest
ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಘಟನೆಯ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ನಗರದ ಒನಕೆ ಓಬಬ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಮಿಕರು ಬೀದಿಗಿಳಿದು ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಜೊತೆಗೆ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಕೋವಿಡ್ ಪರಿಹಾರ ನೀಡುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಸಲ್ಲಿಸಿದರು.