ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರು ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ - ಕರ್ನಾಟಕ ಸ್ಟೇಟ್ ಬಿಲ್ಡಿಂಗ್ ಆ್ಯಂಡ್ ಕನ್ಸ್ಟ್ರಕ್ಷನ್ ವರ್ಕರ್ಸ್ ವೆಲ್ಫೆರ್ ಸಂಘಟನೆ
ಕಟ್ಟಡ ಕಾರ್ಮಿಕರಿಗೆ ಸರ್ಕಾರ ಯಾವುದೇ ಸೌಲಭ್ಯಗಳನ್ನು ನೀಡದೆ ಅನ್ಯಾಯ ಎಸಗುತ್ತಿದೆ ಎಂದು ಚಿತ್ರದುರ್ಗದಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತ ಕಟ್ಟಡ ಕಾರ್ಮಿಕರು
ಕರ್ನಾಟಕ ಸ್ಟೇಟ್ ಬಿಲ್ಡಿಂಗ್ ಆ್ಯಂಡ್ ಕನ್ಸ್ಟ್ರಕ್ಷನ್ ವರ್ಕರ್ಸ್ ವೆಲ್ಫೆರ್ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.
ಇನ್ನು ಮೆರವಣಿಗೆ ನಂತರ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ತಮ್ಮ ಎಲ್ಲ ಬೇಡಿಕೆಗಳನ್ನು ಈ ಕೂಡಲೆ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
TAGGED:
Building workers protest