ಕರ್ನಾಟಕ

karnataka

ETV Bharat / state

ಹಿರಿಯೂರು ಬಳಿ ಭೀಕರ ಅಪಘಾತ: ಬಸ್ ಚಾಲಕ ಸ್ಥಳದಲ್ಲೇ ಸಾವು, 8 ಮಂದಿಗೆ ಗಾಯ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಪ್ಲಿಹಟ್ಟಿ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

By

Published : Sep 27, 2019, 11:15 AM IST

ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿರುವುದು

ಚಿತ್ರದುರ್ಗ: ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, 8 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಕಪ್ಲಿಹಟ್ಟಿ ಬಳಿ ನಡೆದಿದೆ.

ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿರುವುದು

ಕಲಬುರಗಿಯಿಂದ ಬೆಂಗಳೂರು ಕಡೆ ಹೊರಟಿದ್ದ ಕೆಎಸ್ಆರ್​ಟಿಸಿ ಬಸ್ ಮತ್ತು ಹಿರಿಯೂರು ತಾಲೂಕಿನಿಂದ ಚಳ್ಳಕೆರೆ ಕಡೆ ಹೊರಟಿದ್ದ ಲಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ ಪ್ರೇಮನಾಥ್ (45) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ABOUT THE AUTHOR

...view details