ಚಿತ್ರದುರ್ಗ:ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಸಂಬಂಧಿಸಿದಂತೆ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸುತ್ತಿದೆ.
ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಪುತ್ರ ವಿಜಯೇಂದ್ರ - ಚಿತ್ರದುರ್ಗ ಮತ ಪ್ರಚಾರ ಸುದ್ದಿ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಪರ ಇಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ ಪ್ರಚಾರ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದ ಪರ ಇಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ ಪ್ರಚಾರ ನಡೆಸಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಶಾಸಕ ಚಂದ್ರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಬಿ.ವೈ ವಿಜಯೇಂದ್ರ ಪದವೀಧರರ ಬಳಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತಿಳಿಸುತ್ತಾ ಮತ ಯಾಚಿಸಿದ್ದಾರೆ.
ಇನ್ನು ಹೊಳಲ್ಕೆರೆ ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಮತಯಾಚಿಸುತ್ತಿದ್ದ ಬಿ.ವೈ ವಿಜಯೇಂದ್ರಗೆ ಸ್ಥಳೀಯ ಬಿಜೆಪಿ ಶಾಸಕ ಚಂದ್ರಪ್ಪ ಸಾಥ್ ನೀಡಿದರು. ಇದೇ ವೇಳೆ, ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಅಂತರ ಕಾಪಾಡದೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದು, ಕಂಡುಬಂತು.