ಚಿತ್ರದುರ್ಗ:ದ್ವಿಚಕ್ರ ವಾಹನಕ್ಕೆ ರಭಸವಾಗಿ ಬಂದ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ.
ದ್ವಿಚಕ್ರ ವಾಹನಕ್ಕೆ ಟಾಟಾ ಏಸ್ ಡಿಕ್ಕಿ: ಓರ್ವ ಸಾವು - byke accident in chitradurga
ಚಿತ್ರದುರ್ಗ ಜಿಲ್ಲೆಯ ಕುರುಡಿಹಳ್ಳಿ ಬಳಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಓರ್ವನ ಸಾವು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕುರುಡಿಹಳ್ಳಿಯ ಲಂಬಾಣಿಹಟ್ಟಿಯ ನಿವಾಸಿ ಗಿರೀಶ ನಾಯ್ಕ (35) ಎಂದು ಗುರುತಿಸಲಾಗಿದೆ.
ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.