ಚಿತ್ರದುರ್ಗ:ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಖಂಡಿಸಿ ಟಿಪ್ಪು ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಟಿಪ್ಪು ಖಾಸಿಂ ಅಲಿ ನೇತೃತ್ವದಲ್ಲಿ ನಗರದ ಡಿ.ಸಿ. ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಟಿಪ್ಪು ಜಯಂತಿ ರದ್ದು: ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಪ್ರತಿಭಟನೆ - Cancel Tipu Jayanti
ಟಿಪ್ಪು ಜಯಂತಿ ರದ್ದುಗೊಳಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
![ಟಿಪ್ಪು ಜಯಂತಿ ರದ್ದು: ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-4058154-thumbnail-3x2-ctd.jpg)
ಟಿಪ್ಪು ಜಯಂತಿ ರದ್ದು
ಟಿಪ್ಪು ಜಯಂತಿ ರದ್ದುಗೊಳಿಸಿರುವ ಮುಖ್ಯಮಂತ್ರಿ ಬಿಎಸ್ವೈ ವಿರುದ್ಧ ಘೋಷಣೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಗರದ ಒನಕೆ ಓಬವ್ವ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಅಧ್ಯಕ್ಷ ಟಿಪ್ಪು ಖಾಸಿಂ ಅಲಿ ಮಾತನಾಡಿ, ಟಿಪ್ಪು ಜಯಂತಿಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಪರಿಗಣಿಸಿ, ಸರ್ಕಾರದಿಂದಲೇ ಮರು ಆದೇಶ ಹೊರಡಿಸುವಂತೆ ಆಗ್ರಹಿಸಿದರು.