ಕರ್ನಾಟಕ

karnataka

ETV Bharat / state

ಹಣ ವಸೂಲಿ ಮಾಡಿದ್ರೆ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು, ಇದು ಈಟಿವಿ ಭಾರತ ಫಲಶೃತಿ - ಹಣ ವಸೂಲಿಗೆ ನಿಂತಾ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು

ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಹಣ ವಸೂಲಿ, ತೂಕದಲ್ಲಿ ಮೋಸಕ್ಕಿಳಿದಿದ್ದ ಮೂರು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಈಟಿವಿ ಭಾರತ ವಿಸ್ತೃತ ವರದಿ ಮಾಡಿತ್ತು. ವರದಿ ಗಮನಿಸಿದ ಆಹಾರ ಸರಬರಾಜು ಇಲಾಖೆ ಪರವಾನಗಿ ರದ್ದು ಮಾಡಿ ಆದೇಶ ಹೊರಡಿಸಿದೆ.

Chitradurga
ಹಣ ವಸೂಲಿಗೆ ನಿಂತಾ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು, ಇದು ಈಟಿವಿ ಭಾರತ ಫಲಶೃತಿ

By

Published : Apr 10, 2020, 5:59 PM IST

ಚಿತ್ರದುರ್ಗ: ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್​ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ನೀಡಬೇಕು ಎಂದು ಆದೇಶ ಹೊರಡಿಸಿತ್ತು.

ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಹಣ ವಸೂಲಿ, ತೂಕದಲ್ಲಿ ಮೋಸಕ್ಕಿಳಿದಿದೆಯಾ ಮೂರು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಈಟಿವಿ ಭಾರತ ವಿಸ್ತೃತ ವರದಿ ಮಾಡಿತ್ತು. ವರದಿ ಗಮನಿಸಿದ ಆಹಾರ ಸರಬರಾಜು ಇಲಾಖೆ ಪರವಾನಗಿ ರದ್ದು ಮಾಡಿ ಆದೇಶ ಹೊರಡಿಸಿದೆ.

ಚಿತ್ರದುರ್ಗ‌ ನಗರದ ಗಾಂಧಿನಗರ ಬಡಾವಣೆ ಹಿರಿಯೂರು ತಾಲೂಕಿನ ಬಬ್ಬೂರು, ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ‌ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಿ ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆಯಿಂದ ಆದೇಶ ಹೊರಡಿಸಿರುವುದು ಈಟಿವಿ ಭಾರತ ವರದಿಗೆ ಜಯ ಸಿಕ್ಕಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಮೋಸದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದರಿಂದ ತಹಶೀಲ್ದಾರ್ ವೆಂಕಟೇಶಯ್ಯ, ಆಹಾರ ಇಲಾಖೆ ಅಧಿಕಾರಿಗಳಿಂದ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಆದೇಶ ಹೊರಡಿಸಿ, ಉಳಿದ ಉಚಿತ ಪಡಿತರ ವಿತರಿಸಿ ನಿಯಮ ಪಾಲಿಸುವಂತೆ ಎಚ್ಚರಿಕೆ ಇಲಾಖೆಯ ಉಪ ನಿರ್ದೇಶಕ ಕೆ.ಪಿ.ಮಧುಸೂದನ್ ಖಡಕ್ ಸಂದೇಶ ರವಾನಿಸಿದರು.

ABOUT THE AUTHOR

...view details