ಚಿತ್ರದುರ್ಗ:ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ: ಕಾರುಗಳ ಮಧ್ಯೆ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು - ಚಿತ್ರದುರ್ಗ ಅಪಘಾತ ಸುದ್ದಿ
ರಾಷ್ಟ್ರೀಯ ಹೆದ್ದಾರಿಯಲ್ಲಿ 150ರಲ್ಲಿ ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
![ಚಿತ್ರದುರ್ಗ: ಕಾರುಗಳ ಮಧ್ಯೆ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು car accident](https://etvbharatimages.akamaized.net/etvbharat/prod-images/768-512-10389807-thumbnail-3x2-chaii.jpg)
ಕಾರು ಅಪಘಾತ
ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ (36), ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ಮಹೇಂದ್ರ (50) ಸ್ಥಳದಲ್ಲೇ ಮೃತರಾದ ದುರ್ದೈವಿಗಳು ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದ ಘಟನೆ ಇದಾಗಿದ್ದು, ಅಪಘಾತದಲ್ಲಿ 5ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.