ಚಿತ್ರದುರ್ಗ:ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು ಕಾರಿನಲ್ಲಿದ್ದ ಮೂವರು ಮೃತರನ್ನು ರಾಜಸ್ಥಾನದ ಮೂಲದ ಜಯರಾಮ್ (30), ಸುಶೀಲಾ(26), ಆಕಾಶ್ (04) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಾಣಾರಾಮ್, ಕರುಣಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನಿಂತಿದ್ದ ಲಾರಿಯ ಹಿಂಭಾಗಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಾಘಾತ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಟ್ರಾಫಿಕ್ ತೆರವುಗೊಳಿಸಿದ್ದಾರೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಹುಟ್ಟೂರಲ್ಲಿ ನೇಜಿ ನಾಟಿ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ.. ಜನತೆ ಫುಲ್ ಫಿದಾ