ಚಿತ್ರದುರ್ಗ:ರಸ್ತೆ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ ಜೆಸಿಬಿಗೆ, ಮಾರುತಿ ಕಾರು ಡಿಕ್ಕಿಯಾದ ಪರಿಣಾಮ ಗ್ರಾಪಂ ಚುನಾವಣೆ ಸ್ಪರ್ಧಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ಜಿಲ್ಲಾಸ್ಪತ್ರೆ ಮುಖ್ಯ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.
ಜೆಸಿಬಿಗೆ ಕಾರು ಡಿಕ್ಕಿ; ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು - ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು
ಚಿತ್ರದುರ್ಗ ನಗರ ಜಿಲ್ಲಾಸ್ಪತ್ರೆಯ ಮುಖ್ಯರಸ್ತೆಯಲ್ಲಿ ನಿಂತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಯನ್ನು ಕೆಂಚಪ್ಪ (40) ಎಂದು ಗುರುತಿಸಲಾಗಿದೆ. ಈತ ಚಳ್ಳಕೆರೆ ತಾಲೂಕಿನ ಸ್ವಾಮಗುದ್ದಿ ಪಂಚಾಯಿತಿ ವ್ಯಾಪ್ತಿಯ ಹಿರೆಮಾದರಿ ಗ್ರಾಮದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ನಿನ್ನೆ ತಡರಾತ್ರಿ ಚುನಾವಣಾ ಮತದಾನ ಮುಗಿಸಿಕೊಂಡು ಮೂವರು ಗೆಳೆಯರ ಜೊತೆಗೆ ಬರುತ್ತಿದ್ದರು. ಈ ವೇಳೆ ನಿಂತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಮೃತ ಕೆಂಚಪ್ಪ ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡ ಹೊಸದುರ್ಗ ರಸ್ತೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ.
ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ಮಾರ್ಗದಲ್ಲಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಗಳ ಸ್ಥಳದಲ್ಲಿ ಅಧಿಕಾರಿಗಳು ಯಾವುದೇ ನಾಮಫಲಕ ಅಳವಡಿಕೆ ಮಾಡಿಲ್ಲ. ಇದರಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.