ಚಿತ್ರದುರ್ಗ:ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಮೇಲೆ ಹಾರಿದ ಪರಿಣಾಮ ಮುಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿದ ಕಾರು: ಓರ್ವ ಸಾವು - chitradurga accident
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರು ಡಿವೈಡರ್ ಹಾರಿದ ಪರಿಣಾಮ ಮುಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿದ್ದಾನೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಕಾರು: ಓಬ್ಬ ಸಾವು
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಶುಭಂ(35) ಮೃತ ವ್ಯಕ್ತಿಯಾಗಿದ್ದು, ಕಾರು ಚಾಲಕ ಕುಮಾರಸ್ವಾಮಿ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.