ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರು, ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಬೊಗಳೆರಹಟ್ಟಿ ಗ್ರಾಮದ NH13 ನಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು - ದಾವಣಗೆರೆ ಜಿಲ್ಲೆ ಜಗಳೂರು
ಚಿತ್ರದುರ್ಗ ತಾಲೂಕಿನ ಬೊಗಳೆರಹಟ್ಟಿ ಗ್ರಾಮದ NH13 ನಲ್ಲಿ ಕಾರೊಂದು ಮತ್ತೊಂದು ಕಾರು, ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಿಂದ ನುಜ್ಜುಗುಜ್ಜಾದ ವಾಹನ
ಕಾರಿನಲ್ಲಿದ್ದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಂಗಾರಕ್ಕನಗುಡ್ಡ ಗ್ರಾಮದ ಳಾನಿವಾಸಿಗದ ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22) ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಗಾಯಗೊಂಡಾತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.