ಚಿತ್ರದುರ್ಗ:ಚಾಲಕನನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹಳ್ಳಕ್ಕೆ ಉರುಳಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ನುಲೇನೂರ್ ಗೇಟ್ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ.
ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಪ್ಪಿದ ದುರಂತ - ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹಳ್ಳಕ್ಕೆ ಉರುಳಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ನುಲೇನೂರ್ ಗೇಟ್ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಪ್ಪಿದ ಭಾರಿ ಅನಾಹುತ
ಕಾರು ಹಳ್ಳದಲ್ಲಿ ತಲೆಕೆಳಗಾಗಿ ಬಿದ್ದ ಹಿನ್ನೆಲೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆದರೆ, ಅದೃಷ್ಠವಶಾತ್ ಯಾವುದೇ ಪ್ರಣಹಾನಿಯಾಗಿಲ್ಲ. ಈ ಕಾರು ಯಾರಿಗೆ ಸೇರಿದ್ದು ಎಂಬುದರ ಬಗ್ಗೆಯಾಗಲಿ, ಗಾಯಳುಗಳ ಬಗ್ಗೆಯಾಗಲಿ ಸದ್ಯಕ್ಕೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಘಟನಾಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.