ಚಿತ್ರದುರ್ಗ: ಟೈಯರ್ ಬರ್ಸ್ಟ್ ಆಗಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಬೆಂಗಳೂರಿಗೆ ಕರ್ತವ್ಯಕ್ಕೆ ಎಂದು ಮರಳುತ್ತಿದ್ದ, ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮರಡಿಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ನಡೆದಿದೆ.
ಟೈಯರ್ ಬರ್ಸ್ಟ್ ಆಗಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಪೊಲೀಸ್ ಪೇದೆ ಸಾವು - Car tire burst collides to the electric pole
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮರಡಿಹಳ್ಳಿ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಬೆಂಗಳೂರಿಗೆ ಕರ್ತವ್ಯಕ್ಕೆ ಎಂದು ಮರಳುತ್ತಿದ್ದ, ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮತ್ತೊರ್ವ ಪೊಲೀಸ್ ಪೇದೆಗೆ ಗಾಯವಾಗಿದ್ದು, ಹನುಮಂತರಾಯ (30) ಮೃತ ಪೊಲೀಸ್ ಪೇದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮರಡಿಹಳ್ಳಿ ಗ್ರಾಮದ ಬಳಿ ಅವಘಡ ಸಂಭವಿಸಿದ್ದು, ಪೊಲೀಸ್ ಪೇದೆಗಳು ರಜೆ ಮೇಲೆ ಅಳಂದ ಗ್ರಾಮಕ್ಕೆ ತೆರಳಿ ಬಳಿಕ ಬೆಂಗಳೂರಿಗೆ ಮರಳುವ ವೇಳೆ ಅಪಘಾತ ಸಂಭವಿಸಿದೆ.
ಈ ಪೊಲೀಸ್ ಪೇದೆಗಳಿಬ್ಬರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಪೇದೆಯನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಮಾಹಿತಿ ಕಲೆಹಾಕಿದರು. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.