ಚಿತ್ರದುರ್ಗ:ಕೆಎಸ್ಆರ್ಟಿಸಿ ಬಸ್ ಹಾಗೂ ಜಿಲ್ಲಾಧಿಕಾರಿ ಕಾರು ನಡುವೆ ನಡೆದಿದ್ದ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿತ್ರದುರ್ಗ ಡಿಸಿ ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ
ಚಿತ್ರದುರ್ಗ ಡಿಸಿ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ನಡೆದಿದ್ದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿತ್ರದುರ್ಗ ಡಿ.ಸಿ ಕಾರು ಅಪಘಾತದ ಭೀಕರ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆ!
ಜಿಲ್ಲಾಧಿಕಾರಿ ಹೋಗುತ್ತಿದ್ದ ಕಾರು ನಿನ್ನೆ ಮಧ್ಯಾಹ್ನ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ಸಾರಿಗೆ ಬಸ್ಗೆ ಡಿಕ್ಕಿಯಾಗಿತ್ತು. ಹಸು ಅಡ್ಡ ಬಂದಿದ್ದರಿಂದ ಈ ಅವಘಡ ಸಂಭವಿಸಿತ್ತು. ಶಿವಮೊಗ್ಗದಿಂದ ನಗರಕ್ಕೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿರುವ ಅಪಘಾತ ದೃಶ್ಯ ಭಯಾನಕವಾಗಿದೆ.
ಚಿತ್ರದುರ್ಗ ಡಿಸಿ ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಈ ದೃಶ್ಯ ಪೆಟ್ರೋಲ್ ಬಂಕ್ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಎಡಗೈ ಬೆರಳಿಗೆ ಸಣ್ಣ ಗಾಯವಾಗಿದೆ.