ಚಿತ್ರದುರ್ಗ:ರೈಲ್ವೆ ಹಳಿ ನಿರ್ಮಾಣ ಸಂದರ್ಭದಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಿಸುವಾಗ ಸಮೀಪದ ರೈತರಿಗೆ ತೊಂದರೆಯಾಗಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.
ರೈಲ್ವೆ ಅಂಡರ್ ಪಾಸ್ ಕಾಮಗಾರಿಗಳಿಂದ ರೈತರಿಗೆ ತೊಂದರೆ ಆದಲ್ಲಿ ಪರಿಹರಿಸಲು ಕ್ರಮ: ಸುರೇಶ್ ಅಂಗಡಿ - Suresh angadi latest news
ಇಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಅಜ್ಜಂಪುರ ಪಟ್ಟಣ ಸಮೀಪ ಹೆಬ್ಬೂರು ಗ್ರಾಮದ ಬಳಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಜ್ಜಂಪುರ ಪಟ್ಟಣ ಸಮೀಪ ಹೆಬ್ಬೂರು ಗ್ರಾಮದ ಬಳಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿಯನ್ನು ಸಾಕಷ್ಟು ಅಡ್ಡಿ ಆತಂಕಗಳ ನಡುವೆಯೂ ಗುತ್ತಿಗೆದಾರರು ಕೇವಲ 31 ದಿನಗಳ ಒಳಗೆ ಪೂರ್ಣಗೊಳಿಸಿದ್ದಾರೆ. ಇದಕ್ಕೆ ಶ್ರಮಿಸಿದ ಸಂಸದ ನಾರಾಯಣಸ್ವಾಮಿ, ರೈಲ್ವೆ ಇಲಾಖೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಕೋಟೇಶ್ವರರಾವ್ ಅವರನ್ನು ಅಭಿನಂದಿಸುವುದಾಗಿ ಹೇಳಿದರು.