ಚಿತ್ರದುರ್ಗ:ಕಳೆದ ಕೆಲ ದಿನಗಳ ಹಿಂದೆ ಸಿರಿಗೆರೆ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಚಿತ್ರದುರ್ಗ: ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ - cheeta captured
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಬೋನಿಗೆ ಬಿದ್ದ ಚಿರತೆ
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮಸ್ಥರನ್ನು ಆತಂಕಕ್ಕೆ ದೂಡಿದ್ದ ಚಿರತೆ ಸೆರೆ ಸಿಕ್ಕಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ 15 ದಿನಗಳಿಂದ ಸಿರಿಗೆರೆ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಭಯ ಬಿದ್ದಿದ್ದರು. ನಾಲ್ಕು ಜಾನುವಾರುಗಳನ್ನು ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಿರಿಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವರ ಹೊಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನ್ಗೆ ಚಿರತೆ ಬಿದ್ದಿರುವುದು ಗ್ರಾಮಸ್ಥರ ಆತಂಕ ದೂರ ಮಾಡಿದೆ.