ಚಿತ್ರದುರ್ಗ:ಕೊರೊನಾ ವೈರಸ್ ಸೋಂಕಿತರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ ಸದ್ಯ 86 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಆಯಾ ವ್ಯಕ್ತಿಗಳ ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ.
ಚಿತ್ರದುರ್ಗದಲ್ಲಿ 86 ಜನರ ಮೇಲೆ ನಿಗಾ: 91 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನೆ
ಕೊರೊನಾ ವೈರಸ್ ಸೋಂಕಿತರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ ಸದ್ಯ 86 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಆಯಾ ವ್ಯಕ್ತಿಗಳ ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ.
91 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 71 ಜನರ ವರದಿ ನೆಗೆಟಿವ್ ಎಂದು ಬಂದಿದೆ. ಏರ್ಪೋರ್ಟ್ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ 117 ಜನರ ಬಗ್ಗೆ ಮಾಹಿತಿ ಪಡೆಯಲಾಗಿತ್ತು. ಜಿಲ್ಲೆಯಲ್ಲಿ ರ್ಯಾಪಿಡ್ ರೆಸ್ಕ್ಯೂ ತಂಡದವರು ವಿದೇಶದಿಂದ ಬಂದಂತಹ ಹಾಗೂ ಅವರ ಸಂಪರ್ಕ ಇರುವಂತಹ ಒಟ್ಟು 114 ಜನರನ್ನು ಗುರುತಿಸಿದ್ದು, ನಿಗಾದಲ್ಲಿ ಇರಿಸಲಾಗಿದೆ.
2 ಜನರನ್ನು ಆಸ್ಪತ್ರೆ ಐಸೋಲೇಷನ್ ನಿಗಾದಲ್ಲಿ ಇರಿಸಲಾಗಿದೆ. ಇದುವರೆಗೂ 19 ಜನರನ್ನ ಬೇರೆ ಜಿಲ್ಲೆಗಳಿಗೆ ಶಿಫಾರಸು ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 233 ಜನರನ್ನು ನಿಗಾ ವಹಿಸುವುದಕ್ಕಾಗಿ ಗುರುತಿಸಲಾಗಿತ್ತು. ಶಂಕಿತ ಪ್ರಕರಣವೆಂದು ಪರಿಗಣಿಸಿದ್ದವರ ಪೈಕಿ 117 ಜನರು ಈಗಾಗಲೇ 14 ದಿನಗಳ ಕ್ವಾರಂಟೈನ್ ಅವಧಿಯನ್ನ ಪೂರ್ಣಗೊಳಿಸಿದ್ದು, ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಇನ್ನೂ 9 ಜನರ ಪ್ರಯೋಗಾಲಯ ವರದಿ ಬರುವುದು ಬಾಕಿಯಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ.