ಚಿತ್ರದುರ್ಗ:ಜಿಲ್ಲೆಯಲ್ಲಿಂದು 80 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 59 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ: 80 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1430ಕ್ಕೆ ಏರಿಕೆ - 80 Corona case detected
ಚಿತ್ರದುರ್ಗದಲ್ಲಿಂದು 80 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1430ಕ್ಕೆ ಏರಿಕೆಯಾಗಿದೆ. 645 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್- 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
![ಚಿತ್ರದುರ್ಗ: 80 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1430ಕ್ಕೆ ಏರಿಕೆ ಜಿಲ್ಲಾ ಸ್ಪತ್ರೆ](https://etvbharatimages.akamaized.net/etvbharat/prod-images/768-512-8422543-570-8422543-1597418412312.jpg)
ಜಿಲ್ಲಾ ಸ್ಪತ್ರೆ
ಚಿತ್ರದುರ್ಗ22, ಹೊಳಲ್ಕೆರೆ 01, ಹಿರಿಯೂರು ತಾಲೂಕಿನಲ್ಲಿ 07, ಮೊಳಕಾಲ್ಮೂರು 33, ಚಳ್ಳಕೆರೆ 01, ಹೊಸದುರ್ಗ16 ಒಟ್ಟು 51 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1430ಕ್ಕೆ ಏರಿಕೆಯಾಗಿದ್ದು, ಒಟ್ಟು 766 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನುಳಿದ 645 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್- 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.