ಚಿತ್ರದುರ್ಗ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆದಿವಾಲ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಸುವರ್ಣಮ್ಮ (56), ಅರುಣ್ ಕುಮಾರ್ (35) ಮೃತಪಟ್ಟಿದ್ದು, ಗಾಯಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.