ಚಿತ್ರದುರ್ಗ:ನಗರದಲ್ಲಿ ಸುಗಮ ಸಂಚಾರ, ರಸ್ತೆ ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಕಬ್ಬಿಣದ ಅದಿರು ಸಾಗಿಸುವ ಮೈನ್ಸ್ ಲಾರಿಗಳು ನಗರದ ಒಳಗಡೆ ಸಂಚರಿಸದಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ. ಸಾರ್ವಜನಿಕ ಸುಗಮ ಸಂಚಾರ ಕ್ರಮಗೊಳಿಸುವ ದೃಷ್ಟಿಯಿಂದ ಹಾಗೂ ಬೆಳಿಗ್ಗೆ ಶಾಲೆಗೆ ತೆರಳುವ ಮಕ್ಕಳ ಹಿತದೃಷ್ಟಿಯಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮೈನ್ಸ್ ಲಾರಿಗಳಿಗೆ ಚಿತ್ರದುರ್ಗ ನಗರದ ಒಳಗಡೆ ನಿರ್ಬಂಧಿಸಲಾಗಿದೆ.
ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಮಾರ್ಗವಾಗಿ ಬರುವ ಲಾರಿಗಳು, ಮಾಳಪ್ಪನಹಟ್ಟಿ ರಸ್ತೆಯಿಂದ ಕಬ್ಬಿಣದ ಅದಿರು ಸಾಗಿಸುವ ಮೈನ್ಸ್ ಲಾರಿಗಳು ರಾಷ್ಟ್ರೀಯ ಹೆದ್ದಾರಿ-50(ಎ) ಬೈಪಾಸ್ನಿಂದ ಮುರುಘಾಮಠ ಕ್ರಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿ 48 ಸೇರಬೇಕು.