ಚಿತ್ರದುರ್ಗ:ಬೆಂಗಳೂರಿನಲ್ಲಿಂದು ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ರಾಜಭವನ ಚಲೋ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು ಜಿಲ್ಲೆಯ ಒನಕೆ ಓಬವ್ವ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರಾಜಭವನ ಚಲೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೋಟೆನಾಡಿನ ಕೈ ಕಾರ್ಯಕರ್ತರು - Chitradurga Onake obavva circle
ಬೆಂಗಳೂರಿನಲ್ಲಿಂದು ಕಾಂಗ್ರೆಸ್ನಿಂದ ಹಮ್ಮಿಕೊಳ್ಳಲಾಗಿರುವ ರಾಜಭವನ ಚಲೋ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು ಜಿಲ್ಲೆಯ ಒನಕೆ ಓಬವ್ವ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಓಬವ್ವ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧ್ಯಕ್ಷ ತಾಜ್ ಪೀರ್ ನೇತೃತ್ವದಲ್ಲಿ ಕಾರ್ಯಕರ್ತರು ಬೆಳಗಿನ ಜಾವ ರಾಜಧಾನಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ವಿವಿಧ ವಾಹನಗಳಲ್ಲಿ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು, ಜನರು ಬೆಂಗಳೂರಿಗೆ ಪ್ರಯಾಣ ಬೆಳೆಸಿ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳಿದ್ದಾರೆ. ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಇತ್ತೀಚೆಗೆ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ರಾಜ ಭವನ ಚಲೋ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.