ಚಿತ್ರದುರ್ಗ: ಜಿಲ್ಲೆಯಲ್ಲಿಂದು 197 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 37 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ: 197 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 5231ಕ್ಕೆ ಏರಿಕೆ - Corona infection detected in 197 people
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 197 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5231ಕ್ಕೆ ಏರಿಕೆಯಾಗಿದೆ. ಒಟ್ಟು 3811 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲಾಸ್ಪತ್ರೆ ಚಿತ್ರದುರ್ಗ
ಚಿತ್ರದುರ್ಗ 59, ಹೊಳಲ್ಕೆರೆ 28, ಚಳ್ಳಕೆರೆ 22, ಹಿರಿಯೂರು 08, ಹೊಸದುರ್ಗ47, ಮೊಳಕಾಲ್ಮೂರು 33 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5231ಕ್ಕೆ ಏರಿಕೆಯಾಗಿದ್ದು, 3811 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನುಳಿದ 1385 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 35 ಜನ ಕೊನೆಯುಸಿರೆಳೆದಿದ್ದಾರೆ.