ಕರ್ನಾಟಕ

karnataka

ETV Bharat / state

ಜಿಲ್ಲೆಯಲ್ಲಿ 241 ಜನರಿಗೆ ಕೋವಿಡ್ ಸೋಂಕು: ಸೋಂಕಿತರ ಸಂಖ್ಯೆ 5,597ಕ್ಕೆ ಏರಿಕೆ - ಚಿತ್ರದುರ್ಗದಲ್ಲಿ ಕೊರೊನಾ

ಸೋಂಕಿತರ ಪೈಕಿ ಈಗಾಗಲೇ 4,061 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,501 ಸಕ್ರಿಯ ಪ್ರಕರಣಗಳು ಇವೆ.

chitradurga covid case
chitradurga covid case

By

Published : Sep 19, 2020, 2:32 AM IST

ಚಿತ್ರದುರ್ಗ: ಜಿಲ್ಲೆಯಲ್ಲಿ 241 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಇದೀಗ ಒಟ್ಟು ಸೋಂಕಿತರ ಸಂಖ್ಯೆ 5,597ಕ್ಕೆ ಏರಿಕೆಯಾಗಿದೆ.

2,805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 241 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,597 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒರ್ವ ಸಾವನ್ನಪ್ಪಿದ್ದಾನೆ.

ಸೋಂಕಿತರ ಪೈಕಿ ಈಗಾಗಲೇ 4,061 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,501 ಸಕ್ರಿಯ ಪ್ರಕರಣಗಳು ಇವೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 1,396 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 37,907 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 53,448 ಜನರ ಮಾದರಿ ಸಂಗ್ರಹಿಸಲಾಗಿದ್ದು, 45,828 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 1,571 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೊಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತ ಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details