ಚಿತ್ರದುರ್ಗ: ಜಿಲ್ಲಾಧಿಕಾರಿ ಆಪ್ತ ಅಸಹಾಯಕರಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾ - Chitradurgha DC office staff covid positive news
ಚಿತ್ರದುರ್ಗ ಜಿಲ್ಲಾ ಆರೋಗ್ಯಧಿಕಾರಿ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ಪ್ರಕರಣಗಳು ಕಂಡು ಬಂದ ಹಿನ್ನೆಲೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
DC office
ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಯಾನಿಟೈಸ್ ಮಾಡುವ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕರದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ.
ಇನ್ನು ಜಿಲ್ಲಾ ಆರೋಗ್ಯಧಿಕಾರಿ ಕಚೇರಿಯಲ್ಲಿ ಸಹ 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಡಿಹೆಚ್ಒ ಕಚೇರಿಗೆ ಸಹ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.