ಚಿತ್ರದುರ್ಗ:ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಹುತಾತ್ಮರ ದಿನವನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.
ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರಿಗೆ ಡಿಸಿ ಗೌರವ ಸಲ್ಲಿಕೆ - ಹುತಾತ್ಮರಿಗೆ ಗೌರವ ಸಮರ್ಪಣೆ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಹುತಾತ್ಮರ ದಿನವನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಂದ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು.
![ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರಿಗೆ ಡಿಸಿ ಗೌರವ ಸಲ್ಲಿಕೆ Chitradurga District Collector](https://etvbharatimages.akamaized.net/etvbharat/prod-images/768-512-5901053-thumbnail-3x2-ctd.jpg)
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಂದ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಹುತಾತ್ಮರಿಗೆ ಗೌರವ ಸಮರ್ಪಿಸಿದರು. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಷ್ಟ್ರದ ಐಕ್ಯತೆ ಉತ್ತೇಜಿಸುವುದು ಮತ್ತು ಆದರ್ಶಗಳಿಗೆ ಬದ್ಧರಾಗುವ ದೃಷ್ಟಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣತೆತ್ತವರ ಸ್ಮರಣಾರ್ಥ ಹುತಾತ್ಮರ ದಿನ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ತಹಶಿಲ್ದಾರ್ ವೆಂಕಟೇಶಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮರ ಗೌರವಾರ್ಥ ಮೌನಾಚರಣೆ ಮಾಡಲಾಯಿತು.