ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಕಾಯ್ದೆ ವಿರುದ್ಧ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಜನವರಿ 26ರಂದು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ.
ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಪ್ರಯಾಣ ಬೆಳೆಸಿದ ರೈತ ಮುಖಂಡರು!
ದಾವಣಗೆರೆ ಮೂಲಕ ರೈತ ಮುಖಂಡರು ದೆಹಲಿ ತೆರಳುತ್ತಿದ್ದು, ರೈಲಿನಲ್ಲಿ ಘೋಷಣೆ ಕೂಗಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇದೀಗ ಈ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಟೆನಾಡಿನ 20ಕ್ಕೂ ಅಧಿಕ ರೈತ ಮುಖಂಡರು ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರೈಲು ಹತ್ತಿದ್ದಾರೆ.
ದಾವಣಗೆರೆ ಮೂಲಕ ರೈತ ಮುಖಂಡರು ದೆಹಲಿ ತೆರಳುತ್ತಿದ್ದು, ರೈಲಿನಲ್ಲಿ ಘೋಷಣೆ ಕೂಗಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆಗಳು ರೈತ ಸಂಕುಲಕ್ಕೆ ಮಾರಕವಾಗಿವೆ ಎಂದು ಘೋಷಣೆ ಕೂಗಿ ರೈತ ಮಖಂಡರು ದೆಹಲಿಯತ್ತ ತೆರಳುತ್ತಿದ್ದಾರೆ. ರೈತ ವಿರೋಧಿ ಜಾರಿ ಮಾಡುವುದು ಸರಿಯಲ್ಲ. ತಕ್ಷಣ ಕಾಯ್ದೆಗಳನ್ನ ರದ್ಧುಪಡಿಸುವಂತೆ ಆಗ್ರಹಿಸಿದ್ದಾರೆ.