ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ.
ಎಸ್‍ಎಸ್‍ಎಲ್‍ಸಿ ಫಲಿತಾಂಶ: ಚಿತ್ರದುರ್ಗ ಸರ್ಕಾರಿ ವಸತಿ ಶಾಲೆಗಳಿಂದ ಉತ್ತಮ ಸಾಧನೆ - ವಸತಿ ಶಾಲೆಗಳ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ
ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ವಸತಿ ಶಾಲೆಗಳಿಂದ ಒಟ್ಟು 815 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 791 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 97.06 ರಷ್ಟು ಫಲಿತಾಂಶ ಬಂದಿದೆ.
![ಎಸ್‍ಎಸ್‍ಎಲ್‍ಸಿ ಫಲಿತಾಂಶ: ಚಿತ್ರದುರ್ಗ ಸರ್ಕಾರಿ ವಸತಿ ಶಾಲೆಗಳಿಂದ ಉತ್ತಮ ಸಾಧನೆ residential schools got good results](https://etvbharatimages.akamaized.net/etvbharat/prod-images/768-512-05:44:01:1597320841-kn-ctd-03-13-vasathi-school-av-7204336-13082020174004-1308f-1597320604-468.jpg)
ಜಿಲ್ಲೆಯ 18 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಒಟ್ಟು 815 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 791 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 97.06 ರಷ್ಟು ಫಲಿತಾಂಶ ಬಂದಿದೆ.
198 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 578 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.95.21 ಫಲಿತಾಂಶ ಬಂದಿದೆ. ಹಿರಿಯೂರು ತಾಲೂಕಿನ ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (ಪ.ಜಾತಿ) ವಿದ್ಯಾರ್ಥಿ ಕೆ. ಬಸವರಾಜು 618 (98.88%) ಅಂಕಗಳನ್ನು ಪಡೆದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ಮೊದಲಿಗನಾಗಿ ವಸತಿ ಶಾಲೆಗೆ ಕೀರ್ತಿ ತಂದಿದ್ದಾನೆ.